Publish Date: Mon, 11 May 2020 (21:41 IST)
Updated Date: Mon, 11 May 2020 (21:43 IST)
ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದರು.
ಪ್ರಮುಖವಾಗಿ ಕೊರೊನಾ ವೈರಸ್ ನಿಗ್ರಹ ಮತ್ತು ಲಾಕ್ ಡೌನ್ ಸಡಿಲಿಕೆ ನಂತರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಮಂತ್ರಿಗಳು ಚರ್ಚಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಡಾ. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವ ಸುಧಾಕರ, ಬಸವರಾಜ ಬೊಮ್ಮಾಯಿ ಸಿಎಂ ಜೊತೆಗಿದ್ದರು.