ಬೆಂಗಳೂರು: ನಿನ್ನೆ ರಾತ್ರಿ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಕಿತ್ಸೆ ಪಡೆದು ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರ ಜ್ವರ ಮತ್ತು ಬಿಪಿಯಿಂದ ಬಳಲುತ್ತಿದ್ದ ಬಿಎಸ್ ವೈಗೆ ವೈದ್ಯ ಡಾ.ಪ್ರಮೋದ್ ತುರ್ತು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಬಿಎಸ್ ವೈ, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲಿಯೇ ದೀಪಾವಳಿ ಹಬ್ಬ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ.