ಬಿಜೆಪಿ ಪಕ್ಷದಲ್ಲಿ 75 ವರ್ಷ ತುಂಬಿದವರಿಗೆ ಯಾವುದೇ ಅಧಿಕಾರ ದೊರೆಯುವುದಿಲ್ಲ ಎನ್ನುವ ವಿಪಕ್ಷಗಳ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನನ್ನ ಅನುಭವ, ಯೋಗ್ಯತೆ ನೋಡಿಯೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ದಾಗಿ ತಿಳಿಸಿದರು.
ಮುಂದಿನ ವರ್ಷಕ್ಕೆ ನನಗೆ 75 ವರ್ಷ|ಗಳು ತುಂಬುತ್ತವೆ. ಅದಾಗ್ಯೂ ಬಿಜೆಪಿ ವರಿಷ್ಠರು ನನ್ನ ಮೇಲಿನ ವಿಶ್ವಾಸದಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. 75 ವರ್ಷ ಆದವರಿಗೆ ಅಧಿಕಾರ ಸಿಗಲ್ಲ ಎನ್ನುವುದು ಅಪ್ರಸ್ತುತ ಎಂದರು.
ಜನರು ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಶಿಕಾರಿಪುರದಿಂದ ಸ್ಪರ್ಧಿಸುವ ಬಗ್ಗೆ ಯೋಚನೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.