Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಎಸ್‌ವೈ ಪುಂಗಿ ಊದುವ ಹಾವಾಡಿಗ, ಅನಂತ್‌ಕುಮಾರ್ ವಿದೂಷಕ: ಸಿಎಂ

ಬಿಎಸ್‌ವೈ ಪುಂಗಿ ಊದುವ ಹಾವಾಡಿಗ, ಅನಂತ್‌ಕುಮಾರ್ ವಿದೂಷಕ: ಸಿಎಂ
ಕಲಬುರಗಿ: , ಶನಿವಾರ, 16 ಡಿಸೆಂಬರ್ 2017 (18:37 IST)
ಯಡಿಯೂರಪ್ಪ ಬರೀ ಪುಂಗಿ ಊದುತ್ತಾರೆ ಹೊರತು, ಅವರ ಬುಟ್ಟಿಯಲ್ಲಿ ಹಾವೇ ಇಲ್ಲ. ಹೋದಲ್ಲೆಲ್ಲ  ಸುಳ್ಳು ಹೇಳುವ ವ್ಯಕ್ತಿಯನ್ನು ನಾನು ನೋಡಿಲ್ಲ. ಯಡಿಯೂರಪ್ಪ ಅತ್ಯಂತ ಬೇಜವಾಬ್ದಾರಿ ವ್ಯಕ್ತಿ. ಕೇಂದ್ರ ಸಚಿವ ಅನಂತ್ ಕುಮಾರ್ ವಿದೂಷಕ ನಿದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 
ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬರೀ ಪುಂಗಿ ಊದುತ್ತಿದ್ದಾರೆಯೇ ಹೊರತು ಅವರ ಬುಟ್ಟಿಯಲ್ಲಿ ಹಾವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಅಫಜಲಪುರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಮಹಾ ಸುಳ್ಳುಗಾರ, ಕೇಂದ್ರ ಸಚಿವ ಅನಂತ್ ಕುಮಾರ್ ವಿಧೂಷಕ ಎಂದು ಟೀಕಿಸಿದರು. ಅನಂತ್ ಕುಮಾರ್ ಅವರು ಯಡಿಯೂರಪ್ಪ ಬೀಳುವುದನ್ನೇ ಕಾಯುತ್ತಿದ್ದಾರೆ. ಹೀಗಾಗಿ ಹೋದಲ್ಲೆಲ್ಲ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. 
 
ಕೇಂದ್ರ ಸಚಿವ ಅನಂತ್ ಕುಮಾರ್ ಫೇಸ್ ಬುಕ್ ಸ್ಟೇಟಸ್ ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ತಪರಾಕಿ ಸಾಕಾ ಬೇಕಾ ಎಂದು ಹೇಳುವ ಮೂಲಕ ಬೆಂಕಿ ಹಚ್ಚಿದ್ದು ತಾವೇ ಎಂದು ಒಪ್ಪಿಕೊಂಡಿದ್ದಾರೆ. ಇಂಥವರನ್ನು ಕೇಂದ್ರ ಸಚಿವರೆಂದು ಒಪ್ಪಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು. 
 
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಬಹಿರಂಗ ಸವಾಲಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವು ಬಹಿರಂಗ ಚರ್ಚೆಗೆ ಸಿದ್ಧ. ಯಡಿಯೂರಪ್ಪ ಮತ್ತು ಅನಂತಕುಮಾರ್ ಚರ್ಚೆಗೆ ಬರಲಿ. ಸಚಿವರಾದ ಶರಣಪ್ರಕಾಶ ಪಾಟೀಲ ಮತ್ತು ಪ್ರಿಯಾಂಕ ಖರ್ಗೆ ಸಾಕು ಅವರಿಗೆ ಉತ್ತರ ನೀಡಲು ಎಂದು ತಿಳಿಸಿದರು.
 
ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳ ಬಳಕೆ ಬದಲಿಗೆ ಬ್ಯಾಲೆಟ್ ಪೇಪರ್ ಬಳಸುವುದು ಸೂಕ್ತ. ಬ್ಯಾಲೆಟ್ ಪೇಪರ್ ಗಳೇ ನಂಬಿಕೆಗೆ ಅರ್ಹ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಪ್ರತ್ಯೇಕ ಲಿಂಗಾಯತ ಧರ್ಮ ಕುರಿತು ವರದಿ ಸಿದ್ಧಪಡಿಸಲು ಅಲ್ಪಸಂಖ್ಯಾತ ಆಯೋಗಕ್ಕೆ ಅರ್ಜಿಗಳನ್ನು ಕಳುಹಿಸಿಕೊಡಲಾಗಿದೆ. ಆಯೋಗದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರಕ್ಕೆ ಪ್ರತ್ಯೇಕ ಧರ್ಮದ ಶಿಫಾರಸ್ಸು ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಗಿಫ್ಟ್ ಪಡೆದು ವಿವಾದವನ್ನು ಎಳೆದುಕೊಂಡ ಸಿಎಂ