ರಾಜ್ಯದಲ್ಲಿ ಎರಡು ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದು ಪರ ನಾಯಕರ ಹತ್ಯೆಯಾಗುತ್ತಿವೆ ಇನ್ನು ಎಷ್ಟು ಜನರ ಸಾವಾಗಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ನಗರದ ಮೌರ್ಯಸರ್ಕಲ್ ಬಳಿ ಆಯೋಜಿಸಲಾದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಪ್ರಾಮಾಣಿಕ ಅಧಿಕಾರಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.26 ರೊಳಗೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ಗಡುವು ವಿಧಿಸಿದ ಅವರು, ಸೆ.26 ರ ನಂತರ ಆಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಆತ್ಮಹತ್ಯೆಗಳು, ಹತ್ಯೆಗಳು, ಅನುಮಾನಾಸ್ಪದ ಸಾವುಗಳು ಸಂಭವಿಸುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಇನ್ನೂ ನಿದ್ರೆಯಲ್ಲಿದ್ದಾರೆ. ಎಚ್ಚೆತ್ತುಕೊಳ್ಳುವ ಜಾಯಮಾನ ಅವರದಲ್ಲ. ಪ್ರತಿಭಟನೆಗಳ ಮೂಲಕ ಅವರನ್ನು ಬಡಿದೆಬ್ಬಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.