Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.
ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.