Publish Date: Sat, 05 Aug 2023 (14:00 IST)
Updated Date: Sat, 05 Aug 2023 (13:55 IST)
ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಹಿನ್ನೆಲೆ ಗೃಹಜ್ಯೋತಿ ಫಲಾನುಭವಿಗಳನ್ನ ಕರೆತರಲು ಇನ್ನೂರು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಮತ್ತೊಂದೆಡೆ ಇಂದು ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇನ್ನು ಕಾರ್ಯಕ್ರಮಕ್ಕೆ ಬಂದವರಿಗೆ ಮುಂಜಾನೆ ಉಪಹಾರ ಮತ್ತು ಮಧ್ಯಾಹ್ನದ ಊಟಕ್ಕೆ ಪಲಾವ್ ಮತ್ತು ಲಡ್ಡು ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಜುಲೈ 25 ರವರೆಗೆ ಒಂದು ಕೋಟಿ 41 ಲಕ್ಷ 23 ಸಾವಿರ ಜನರು ನೋಂದಣಿ ಮಾಡಿಕೊಂಡಿದ್ದು, ಅವರು ಯೋಜನೆಯ ಲಾಭ ಪಡೆಯಲಿದ್ದಾರೆ.