Webdunia - Bharat's app for daily news and videos

Install App

ನರ್ಮದಾ ನದಿಗೆ ಬಿದ್ದ ಬಸ್; 13 ಸಾವು

Webdunia
ಸೋಮವಾರ, 18 ಜುಲೈ 2022 (19:06 IST)
ಮಧ್ಯಪ್ರದೇಶದ ಧಾರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂದೋರ್​ನಿಂದ ಪುಣೆಗೆ ಹೋಗುತ್ತಿದ್ದ ಬಸ್​ವೊಂದು ಇಂದು ಬೆಳಗ್ಗೆ ಸೇತುವೆಯಿಂದ ನರ್ಮದಾ ನದಿಗೆ ಬಿದ್ದಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 13 ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ನರ್ಮದಾ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗಿನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ಈಗಾಗಲೇ 13 ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಬಸ್ ತಡೆಗೋಡೆ ಮುರಿದು ನದಿಗೆ ಬಿದ್ದಿದೆ. ಬಸ್ ಅನ್ನು ನದಿಯಿಂದ ಮೇಲೆತ್ತಲು ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳದಲ್ಲಿದ್ದು, ಸ್ಥಳೀಯ ಮೀನುಗಾರರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇಂಧೋರ್ ಮತ್ತು ಧಾರ್‌ನ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯ ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments