ಚಾಮರಾಜನಗರ : ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಿರಂತರ ಮಳೆಯಿಂದಾಗಿ ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿದೆ. ರಸ್ತೆ ಬದಿಗಳಲ್ಲಿ ಮಣ್ಣು ಕೊಚ್ಚಿಹೋಗಿದ್ದು, ದುರಸ್ತಿಗೆ ಬಂದಿದೆ.
ಇನ್ನೂ ಮಳೆ ಹೆಚ್ಚಾದರೆ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.