Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ಯಮಗಳ ಸಂಬಂಧ ಅಗತ್ಯ: ಸಚಿವ ಅಶ್ವತ್ಥ ನಾರಾಯಣ

ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ಯಮಗಳ ಸಂಬಂಧ ಅಗತ್ಯ: ಸಚಿವ ಅಶ್ವತ್ಥ ನಾರಾಯಣ
bangalore , ಮಂಗಳವಾರ, 8 ಫೆಬ್ರವರಿ 2022 (20:05 IST)
webdunia
ಬೆಂಗಳೂರು:-ರಾಜ್ಯದಲ್ಲಿ ಜಾರಿಗೆ ಬರುತ್ತಿರುವ ನೂತನ ಶಿಕ್ಷಣ ನೀತಿಯು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ. ಆದ್ದರಿಂದ ಉದ್ದಿಮೆಗಳು ಶಿಕ್ಷಣ ಸಂಸ್ಥೆಗಳೊಂದಿಗೆ ತಮ್ಮ ಅಗತ್ಯಗಳಿಗೆ ತಕ್ಕಂತೆ ರಚನಾತ್ಮಕ ಸಂಬಂಧ ಹೊಂದಬೇಕು ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರ ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟವು ಆರಂಭಿಸಿರುವ ಉದ್ಯಮ ಪರಿಪೋಷಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಬೆಂಗಳೂರು ನಗರವು ನವೋದ್ಯಮಗಳಿಗೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಉದ್ದಿಮೆಗಳ ಬೆಳವಣಿಗೆಗೆ ಅಗತ್ಯವಿರುವ ಸಕಲ ಬಗೆಯ ನೆರವನ್ನೂ ನೀಡಲು ಸರ್ಕಾರದ ಮುಕ್ತ ಮನಸ್ಸು ಹೊಂದಿದೆ. ಈ ಸಂಬಂಧ ಹತ್ತಾರು ಉಪಯುಕ್ತ ನೀತಿಗಳನ್ನು ರೂಪಿಸಿದೆ.
ಒಕ್ಕೂಟವು ಸರಕಾರ ಕಡಿಮೆ ಶುಲ್ಕವನ್ನು ನಿಗದಿ ಪಡಿಸಿ ಉದ್ಯಮ ಪರಿಪೋಷಣೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಎನ್ಐಪಿ ಜಾರಿಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ದಿಮೆಗಳ ಜೊತೆಗಿನ ಬಾಂಧವ್ಯಕ್ಕೆ ಮಹತ್ವ ಕೊಡಲಾಗಿದೆ ಎಂದು ಅವರು ಹೇಳಿದರು.
ಶಿಕ್ಷಣವು ಸೇರಿದಂತೆ ಸಮಗ್ರ ಶಿಕ್ಷಣ ವ್ಯವಸ್ಥೆಯ ಸುಧಾರಣೆಯನ್ನು ತ್ವರಿತ ಗತಿಯಲ್ಲಿ ಮಾಡಲಾಗುತ್ತಿದೆ. ಇದರ ಜೊತೆಗೆ ಸಂಶೋಧನೆ ಮತ್ತು ನಾವೀನ್ಯತೆಯ ನೀತಿಯನ್ನು ರೂಪಿಸಲಾಗಿದೆ. ಬೆಂಗಳೂರು ನಗರವು ಉದ್ಯೋಗ ಸಂಸ್ಕೃತಿಯಲ್ಲಿ ಪ್ಯಾರಿಸ್ ಸೇರಿದಂತೆ ವಿಶ್ವದ ಅತ್ಯುತ್ತಮ ನಗರಗಳನ್ನು ಕೂಡ ಮೀರಬೇಕು. ಕರ್ನಾಟಕವು ಉಜ್ವಲ ಅವಕಾಶಗಳ ತಾಣವಾಗಿದೆ, ಬಂಡವಾಳ ಹೂಡಿಕೆಗೆ ಪ್ರಶಸ್ತಿಯಾಗಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಪದಾಧಿಕಾರಿಗಳು.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ವರ್ಕ್‌ ಫ್ರಂ ಹೋಂ ರದ್ದು, ಇಂದಿನಿಂದಲೇ ಕಚೇರಿಗೆ ವಾಪಾಸ್