Publish Date: Thu, 05 Dec 2019 (08:02 IST)
Updated Date: Thu, 05 Dec 2019 (08:04 IST)
ಬೆಂಗಳೂರು : ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಅನರ್ಹ ಶಾಸಕರ ಅಳಿವು ಉಳಿವನ್ನು ಇಂದು ಮತದಾರರು ನಿರ್ಧರಿಸಲಿದ್ದಾರೆ.
ಹೊಸಕೋಟೆ, ಚಿಕ್ಕಬಳ್ಳಾಪುರ, ಕೆಆರ್ ಪುರ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಕೆ.ಆರ್ ಪೇಟೆ, ಹುಣಸೂರು, ಹಿರೇಕೂರು, ರಾಣಿಬೆನ್ನೂರು, ಹೊಸಪೇಟೆ, ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಈ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 165 ಮಂದಿ ಕಣಕ್ಕಿಳಿಯುತ್ತಿದ್ದಾರೆ. ಡಿಸೆಂಬರ್ 9 ರಂದು 15 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.