Publish Date: Mon, 15 Oct 2018 (09:06 IST)
Updated Date: Mon, 15 Oct 2018 (09:08 IST)
ಬೆಂಗಳೂರು: ಲೋಕಸಭೆ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಪೂಜೆ ಬಳಿಕ ತಂದೆ ಬಿಎಸ್ ವೈ ಜತೆಗೆ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಇಂದು ನಾಮಪತ್ರ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ. ಆದರೆ ಶಿವಮೊಗ್ಗದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಾರೆಂಬ ಸುದ್ದಿಯಿತ್ತಾದರೂ ಇದೀಗ ತರಾತುರಿಯಲ್ಲಿ ಸ್ಪರ್ಧೆ ಮಾಡದಿರಲು ತೀರ್ಮಾನಿಸಿದ್ದಾರೆ. ನಿನ್ನೆಯಷ್ಟೇ ಅವರು ವಿದೇಶ ಪ್ರವಾಸದಿಂದ ಆಗಮಿಸಿದ್ದು, ಇಂದು ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.