ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನ ಮಾಡಿ ವೃದ್ಧೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಗುಂಡ್ಲುಪೇಟೆಯ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಮ್ಮ ಎನ್ನುವ 80 ವರ್ಷದ ವೃದ್ಧೆ ಮೃತಪಟ್ಟವರು. ಕೊನೆಯ ಕ್ಷಣದಲ್ಲೂ ತನ್ನ ಮತದಾನದ ಹಕ್ಕು ಪೂರೈಸಿರುವುದು ವಿಶೇಷವಾಗಿದೆ.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನದವರೆಗಿನ ವರದಿಯ ಪ್ರಕಾರ ಶೇ. 41 ರಷ್ಟು ಮತದಾನ ನಡೆದಿರುವುದಾಗಿ ವರದಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ