Webdunia - Bharat's app for daily news and videos

Install App

ಬಿಜೆಪಿ ಪಾದಯಾತ್ರೆಯ ರೂಟ್ ಮ್ಯಾಪ್ ನೀಡಿದ ಬಿ ವೈ ವಿಜಯೇಂದ್ರ

Krishnaveni K
ಶುಕ್ರವಾರ, 2 ಆಗಸ್ಟ್ 2024 (15:29 IST)
ಬೆಂಗಳೂರು: ಕಾಂಗ್ರೆಸ್ ಪಕ್ಷ- ಸರಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಜಂಟಿಯಾಗಿ ನಡೆಸುವ ಮೈಸೂರು ಚಲೋ ಪಾದಯಾತ್ರೆಗೆ ನಾಳೆ (ಆ.3) ಬೆಳಿಗ್ಗೆ ಚಾಲನೆ ಸಿಗಲಿದೆ. ಭ್ರಷ್ಟ ಕಾಂಗ್ರೆಸ್ ಹಾಗೂ ಹಗರಣಗಳ ಸರಕಾರ ರಾಜ್ಯದಲ್ಲಿದೆ. ಇದು ಬಡವರ ವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರಕಾರ. ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಶೂನ್ಯತೆಯ ಕೊಡುಗೆ ನೀಡಿದೆ. ಇದು ಅಸಮರ್ಥ ಸರಕಾರ ಎಂದು ಟೀಕಿಸಿದರು.
ಅಹಿಂದ ಹೆಸರಿನಿಂದ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಆ ಎಲ್ಲ ಸಮುದಾಯಗಳಿಗೆ ಮೋಸ ಮಾಡಿದೆ. ಪರಿಶಿಷ್ಟರ ಹಣ ಲೂಟಿ ಮಾಡಿದೆ. ಬಿಜೆಪಿ- ಜೆಡಿಎಸ್ ಜೊತೆಗೂಡಿ ಸದನದ ಒಳಗೆ ಮತ್ತು ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡಿ, ಸರಕಾರವನ್ನು ಒಂಟಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದೇವೆ. ಹಗರಣ, ಭ್ರಷ್ಟಾಚಾರ ಸಂಬAಧ ನಮ್ಮ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಮೊದಲು ಉತ್ತರಿಸಲಿ ಎಂದು ತಿಳಿಸಿದರು.
 
 
8 ದಿನಗಳ ಪಾದಯಾತ್ರೆ..
ಮಾಜಿ ಮುಖ್ಯಮಂತ್ರಿ- ರೈತ ನಾಯಕ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಪಾದಯಾತ್ರೆಗೆ ಚಾಲನೆ ಕೊಡುತ್ತಾರೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಮಂಜುನಾಥ ಕನ್ವೆನ್ಷನ್ ಹಾಲ್ ಬಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. 8 ದಿನಗಳ ಪಾದಯಾತ್ರೆ ಇದಾಗಿರುತ್ತದೆ ಎಂದು ವಿಜಯೇಂದ್ರ ವಿವರಿಸಿದರು.
 
ನಾಳೆ ಸುಮಾರು 16 ಕಿಮೀ ಪಾದಯಾತ್ರೆ ಇರಲಿದೆ. ಎರಡನೇ ದಿನ ಭಾನುವಾರ ಮಂಜುನಾಥ ಕನ್ವೆನ್ಷನ್ ಹಾಲ್ ಬಿಡದಿಯಿಂದ ಆರಂಭಗೊAಡು 22 ಕಿಮೀ, 5ರಂದು ಕೆಂಗಲ್ ಕೆವಿಕೆ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ ಸುಮಾರು 20 ಕಿಮೀ ಕ್ರಮಿಸುತ್ತೇವೆ. 6ರಂದು ನಿಡಘಟ್ಟ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ ಸುಮಾರು 20 ಕಿಮೀ ಕ್ರಮಿಸುತ್ತೇವೆ. 5ನೇ ದಿನ ಮಂಡ್ಯ ಶಶಿಕಿರಣ್ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ 16 ಕಿಮೀ, 8ರಂದು ಗುರುವಾರ ತೂಬಿನಕೆರೆ ಕೈಗಾರಿಕಾ ಪ್ರದೇಶದ ಬಳಿಯಿಂದ, 9ರಂದು ಶುಕ್ರವಾರ ಶ್ರೀರಂಗಪಟ್ಟಣ ಮಂಜುನಾಥ ಕಲ್ಯಾಣಮಂಟಪದಿAದ ಆರಂಭವಾಗಲಿದೆ. 10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ ಎಂದರು.

ಪಾದಯಾತ್ರೆಯಲ್ಲಿ ಪ್ರತಿದಿನ ಕನಿಷ್ಠ 8ರಿಂದ 10 ಸಾವಿರ ಜನರು ಪಾಲ್ಗೊಳ್ಳುತ್ತಾರೆ. ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಬರಲಿದ್ದಾರೆ. ಎಲ್ಲರೂ ಉತ್ಸಾಹದಿಂದ ಭಾಗವಹಿಸುತ್ತಾರೆ. ಇದರ ರೂಟ್ ಮ್ಯಾಪ್ ಸಿದ್ಧಗೊಂಡಿದೆ ಎಂದು ವಿವರ ನೀಡಿದರು.
 
ಹೋರಾಟಕ್ಕೆ ಸಂದ ಜಯ
ಸುಪ್ರೀಂ ಕೋರ್ಟ್ ನಿನ್ನೆ ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ವಿಚಾರದಲ್ಲಿ ಒಂದು ತೀರ್ಪು ನೀಡಿದೆ. ಎಸ್‌ಸಿ, ಎಸ್‌ಟಿ ಮೀಸಲಾತಿ ವರ್ಗೀಕರಣಕ್ಕೆ ರಾಜ್ಯಕ್ಕೆ ಅವಕಾಶ ಕೊಟ್ಟಿದ್ದು, 3 ದಶಕಗಳ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ವಿಶ್ಲೇಷಿಸಿದರು.

ಇದರ ಹಿಂದೆ ಬಿಜೆಪಿ ಪರಿಶ್ರಮವಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಹೆಚ್ಚಿಸಿದ್ದರು. ಪ್ರಧಾನಿ ನರೇಂದ್ರ ಮೋದಿಜೀ ಅವರು ಯಾವತ್ತೂ ಸಾಮಾಜಿಕ ನ್ಯಾಯದ ಪರ ನಿಂತವರು. ಒಳ ಮೀಸಲಾತಿ ಪರವಾಗಿ ಕೇಂದ್ರ ಸರಕಾರ ವಕಾಲತ್ತು ಮಾಡಿತ್ತು ಎಂದರು. ಕೋರ್ಟ್ ತೀರ್ಪಿನ ತೀರ್ಪು ತುರ್ತಾಗಿ ಅನುಷ್ಠಾನದ ಮೂಲಕ ಎಲ್ಲ 101 ಜಾತಿಗಳಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
 

ನಿನ್ನೆ ಕಾಂಗ್ರೆಸ್ ಸರಕಾರ ಹೊಸ ಇತಿಹಾಸ ಸೃಷ್ಟಿಸಿದೆ. ಮುಖ್ಯಮಂತ್ರಿಗಳಿಲ್ಲದೇ ಸಚಿವಸಂಪುಟದ ಸಭೆ ನಡೆದಿದೆ. ರಾಜ್ಯಪಾಲರ ನೋಟಿಸ್‌ಗೆ ಉತ್ತರ ಕೊಡಬೇಕಾದ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಪ್ರಶ್ನಿಸುವ ಕೆಲಸ ಆಗಿದೆ ಎಂದು ಆಕ್ಷೇಪಿಸಿದರು.
 
ಸದನದಲ್ಲಿ ನಮಗೆ ಉತ್ತರ ಕೊಟ್ಟಿಲ್ಲ. ಇವತ್ತು ಸಾಕಷ್ಟು ಪ್ರಶ್ನೆಗಳಿವೆ. ಮುಖ್ಯಮಂತ್ರಿಗಳೇ ನಿಮ್ಮ ಪಲಾಯನವಾದ ಸರಿಯಲ್ಲ ಎಂದು ಆಕ್ಷೇಪಿಸಿದರು. ನಿನ್ನೆ ಕ್ಯಾಬಿನೆಟ್ ಸಭೆಯಲ್ಲಿ ಹಲವಾರು ಸಚಿವರ ಮುಖದಲ್ಲಿ ಮಂದಹಾಸ ಇತ್ತು. ಮುಖ್ಯಮಂತ್ರಿಗಳ ಹಿಂದೆ ಯಾರಿದ್ದಾರೆ ಎಂಬುದಕ್ಕಿತ ಸಿಎಂ ವಿರುದ್ಧ ಯಾರಿದ್ದಾರೆ ಎಂಬುದೂ ಗಮನಿಸತಕ್ಕ ವಿಚಾರ ಎಂದರು.
 
ಮುಡಾದಲ್ಲಿ ಕಮಿಷನರ್ ಮೂಲಕ ಸಾವಿರಾರು ನಿವೇಶನ ಲೂಟಿ ಮಾಡಿ ಅಪಾರ ಹಣ ಲೂಟಿ ಮಾಡಿದ್ದಾರೆ. ಹೋರಾಟ ವ್ಯಕ್ತಿಯ ವಿರುದ್ಧ ಅಲ್ಲ; ಕೆಟ್ಟ ವ್ಯವಸ್ಥೆ ವಿರುದ್ಧ ಎಂದು ತಿಳಿಸಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಬಡವರು, ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯ ಆಗಿದೆ. ಇದರ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಪಾದಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಬರಲಿದ್ದಾರೆ. ಜನಬೆಂಬಲವೂ ಸಿಗಬೇಕಿದೆ. ಅದಕ್ಕಾಗಿ ಪ್ರಚಾರ ಕೊಡಿ ಎಂದು ಮನವಿ ಮಾಡಿದರು.
 
 
ಕಾಂಗ್ರೆಸ್ಸಿಗರದು ಪಶ್ಚಾತ್ತಾಪದ ಯಾತ್ರೆ

ಕಾಂಗ್ರೆಸ್ಸಿಗರದು ಪಶ್ಚಾತ್ತಾಪದ ಯಾತ್ರೆ. ಭ್ರಷ್ಟಾಚಾರರಹಿತ ಆಡಳಿತ ನಡೆಸುವ ಭರವಸೆ ನೀಡಿ, ಜನರ ಕಿವಿಗೆ ಹೂ ಮುಡಿಸಿದವರ ಪಶ್ಚಾತ್ತಾಪದ ಯಾತ್ರೆ ಇದು. ನಮ್ಮ ಯಾತ್ರೆ ಯಶಸ್ವಿಯಾಗಲಿ ಎಂದು ಒಂದು ದಿನ ಮುಂಚಿತವಾಗಿ ಈ ಆಂದೋಲನ ಹಮ್ಮಿಕೊಂಡಿದ್ದಾರೆ ಎಂದು ವಿಜಯೇಂದ್ರ ಅವರು ಪ್ರಶ್ನೆಗೆ ಉತ್ತರ ನೀಡಿದರು. ಜೆಡಿಎಸ್ ಯಾವುದೇ ಷರತ್ತು ಹಾಕಿಲ್ಲ. ನಮ್ಮ ಪಾದಯಾತ್ರೆ ಯಶಸ್ವಿಯಾಗಿ ನಡೆಯಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಪಿತಾಮಹ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಹಗರಣಗಳ ಸಂಬAಧ ಉತ್ತರ ಕೊಡಬೇಕಾದವರು. ಈ ಸರಕಾರ ರಾಜ್ಯದ ಜನರಿಗೆ ಶಾಪವಾಗಿದೆ. ಪಾದಯಾತ್ರೆ ಮೂಲಕ ತೊಡೆ ತಟ್ಟಿದ್ದೇವೆ. ಅವರು ಉತ್ತರ ಕೊಡಲಿ ಎಂದು ಪ್ರಶ್ನೆಗೆ ಉತ್ತರಿಸಿದರು. ಡಿ.ಕೆ.ಶಿವಕುಮಾರ್ ಅವರ ಬಾಯಲ್ಲಿ ಭ್ರಷ್ಟಾಚಾರದ ಕುರಿತ ಮಾತು ಬಾರದೇ ಇದ್ದರೆ ಒಳ್ಳೆಯದು ಎಂದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments