Publish Date: Thu, 23 Nov 2023 (18:00 IST)
Updated Date: Thu, 23 Nov 2023 (18:56 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷದ ಹಿರಿಯ ನಾಯಕರ ಬೇಸರ ಹಾಗೂ ಅಸಮಾಧಾನಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ, ಪುಟ್ಟ ಗೊಂದಲ ಅಸಮಾಧಾನಗಳಿತ್ತು.
ಪಕ್ಷದ ಅಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಕರ್ತವ್ಯ. ಹೀಗಾಗಿ ಇಂದು 30 ನಿಮಿಷಗಳ ಕಾಲ ಅವರೊಂದಿಗೆ ಮುಕ್ತವಾಗಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.