Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹರ್ಯಾಣದಲ್ಲಿ ನಾವೇ ಅಧಿಕಾರಕ್ಕೆ ಬರೋದು ಅಂತಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದೆ: ಬಿವೈ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಮಂಗಳವಾರ, 8 ಅಕ್ಟೋಬರ್ 2024 (11:26 IST)
ಬೆಂಗಳೂರು: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಿದ್ದು, ಇದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಹರ್ಯಾಣದಲ್ಲಿ ಈ ಬಾರಿ ನಾವೇ ಗೆಲ್ಲೋದು, ಬಿಜೆಪಿ ಧೂಳೀಪಟವಾಗುತ್ತದೆ ಎಂದು ಕಾಂಗ್ರೆಸ್ ಮತ್ತು ಇತರೆ ವಿಪಕ್ಷಗಳು ಕೊಚ್ಚಿಕೊಳ್ಳುತ್ತಿದ್ದವು. ಆದರೆ ಅದೆಲ್ಲವನ್ನೂ ಮೀರಿ ಹರ್ಯಾಣದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೇರುವತ್ತ ದಾಪುಗಾಡಲಿಡುತ್ತಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಆರ್ಟಿಕಲ್ 370 ರದ್ದು ಮಾಡಿ ಅಭಿವೃದ್ಧಿ ಮಾಡಿದ್ದೇ ಬಿಜೆಪಿಗೆ  ವರದಾನವಾಗಲಿದೆ. ಮೋದಿಜೀಯವರ ಅಭಿವೃದ್ಧಿಯ ಸಂಕಲ್ಪ, ಅನೇಕ ಹೊಸ ವಿಚಾರಗಳಿಂದ ಬಿಜೆಪಿ ಇಲ್ಲಿ ಮುನ್ನಡೆ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯಕ್ಕೆ ಹರ್ಯಾಣದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಈ ಹಿನ್ನಲೆಯಲ್ಲಿ ಹರ್ಯಾಣದಲ್ಲಿ ಅಧಿಕಾರಕ್ಕೇರುವ ಕಾಂಗ್ರೆಸ್ ಕನಸು ಚೂರಾಗುವ ಲಕ್ಷಣ ಕಾಣುತ್ತಿದೆ. ಇತ್ತ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Haryana Election results: ಕಾಂಗ್ರೆಸ್ ನಿಂದ ಚುನಾವಣೆಗೆ ನಿಂತ ಕುಸ್ತಿಪಟು ವಿನೇಶ್ ಫೋಗಟ್ ಕತೆ ಏನಾಗಿದೆ ನೋಡಿ