Webdunia - Bharat's app for daily news and videos

Install App

ರಾಯರೆಡ್ಡಿ ಹೇಳಿದ್ದು ನಿಜ, ನಮ್ಮ ಕ್ಷೇತ್ರಗಳಿಗೆ ಅನುದಾನವೇ ಬರ್ತಿಲ್ಲ: ಬಿವೈ ವಿಜಯೇಂದ್ರ

Krishnaveni K
ಗುರುವಾರ, 10 ಏಪ್ರಿಲ್ 2025 (11:43 IST)
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ; ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ. ಅವರು ಸತ್ಯವನ್ನೇ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಆ ಸತ್ಯವನ್ನು ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರರ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments