Webdunia - Bharat's app for daily news and videos

Install App

ಇಲ್ಲಿಗೇ ನಿಲ್ಲಲ್ಲ ವಾಲ್ಮೀಕಿ ನಿಗಮ ಹಗರಣ ಹೋರಾಟ, ಸಿಎಂ ಮನೆಗೇ ಮುತ್ತಿಗೆ ಹಾಕ್ತೀವಿ: ಬಿವೈ ವಿಜಯೇಂದ್ರ

Krishnaveni K
ಶನಿವಾರ, 29 ಜೂನ್ 2024 (15:30 IST)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿ.ಎಂ. ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ನುಡಿದರು.

ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ ಎಂದು ಆಕ್ಷೇಪಿಸಿದರು.

ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಅಷ್ಟೇ ಅಲ್ಲ; ಮಾನ್ಯ ಮುಖ್ಯಮಂತ್ರಿಗಳೂ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿದೆ ಎಂದು ಆಗ್ರಹಿಸಿದರು.

ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತದ, ಅಂದರೆ, 187 ಕೋಟಿ ರೂ.ಗಳ ಹಗರಣ ನಡೆಯಲು ಅಸಾಧ್ಯ ಎಂದು ತಿಳಿಸಿದರು.
 
ನಿನ್ನೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗಿದೆ ಎಂದ ಅವರು, ಈ ಹಗರಣದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆದಿದೆ. ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲಿ ಹಲವಾರು ಅಂಶಗಳು ಇವೆ. ಆದರೆ, ರಾಜ್ಯ ಸರಕಾರ ಈ ಪ್ರಕರಣವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.

ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ಲೂಟಿಯ ಇಷ್ಟು ದೊಡ್ಡ ಹಗರಣ ರಾಜ್ಯದಲ್ಲಿ ಯಾವತ್ತೂ ಈ ಹಿಂದೆ ನಡೆದಿರಲಿಲ್ಲ. ಲೋಕಸಭಾ ಚುನಾವಣೆಗೆ ಈ ಹಣ ಬಳಸಿಕೊಂಡ ಕುರಿತು ಸಾಕಷ್ಟು ಚರ್ಚೆಯೂ ನಡೆದಿದೆ ಎಂದು ಗಮನ ಸೆಳೆದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments