ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳು ಸರಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅವರನ್ನು ವರ್ಗಾವಣೆಗೊಳಿಸಬೇಕು ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ.
ಗುಂಡ್ಲುಪೇಟೆಯಲ್ಲಿರುವ ಸರಕಾರಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸದೆ, ಅಡಳಿತ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಧೋರಣೆ ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದೆ ಎಂದು ಆರೋಪಿಸಿದೆ.
ಆಹಾರ ಮತ್ತು ನಾಗರಿಕೆ ಪೂರೈಕೆ ಉಪನಿರ್ದೇಶಕ ರಾಮೇಶ್ವರಪ್ಪ, ಚಾಮರಾಜನಗರ ಜಿಪಂ ಉಪ ಅಧೀಕ್ಷಕ ಅಭಿಯಂತರ ಶಿವಮಾದಯ್ಯ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರೇವಣ್ಣ, ಸಾರ್ವಜನಿಕ ಇಲಾಖೆಯ ಉಪನಿರ್ದೇಶಕ ಬಸಪ್ಪ ಅವರನ್ನು ಕೂಡಲೇ ವರ್ಗಾವಣೆಗೊಳಿಸಬೇಕು ಎಂದು ಚುನಾವಣೆ ಆಯೋಗಕ್ಕೆ ಬಿಜೆಪಿ ಪತ್ರ ಬರೆದಿದೆ.
ಕಾಂಗ್ರೆಸ್ ಪಕ್ಷ ಯಾವುದೇ ರಣತಂತ್ರ ರೂಪಿಸಿದರೂ ಸೋಲು ಖಚಿತವಾಗಿದೆ. ಕ್ಷೇತ್ರದ ಜನತೆ ಬಿಜೆಪಿ ಪರವಾಗಿ ಮತ ಚಲಾವಣೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.