Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಂಜನಗೂಡು, ಗುಂಡ್ಲುಪೇಟೆ ಚುನಾವಣೆ: ಕೆಪಿಸಿಸಿಯಿಂದ ಉಸ್ತುವಾರಿ ನೇಮಕ

ನಂಜನಗೂಡು, ಗುಂಡ್ಲುಪೇಟೆ ಚುನಾವಣೆ: ಕೆಪಿಸಿಸಿಯಿಂದ ಉಸ್ತುವಾರಿ ನೇಮಕ
ಬೆಂಗಳೂರು , ಶನಿವಾರ, 25 ಮಾರ್ಚ್ 2017 (17:11 IST)
ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ.
 
ಉಪಚುನಾವಣೆಗಾಗಿ ನಂಜನಗೂಡು ವಿಧಾನಸಭೆ ಕ್ಷೇತ್ರಕ್ಕೆ ಎಚ್.ಸಿ.ಮಹಾದೇವಪ್ಪ ಉಸ್ತುವಾರಿಯಾಗಿ, ಅಲ್ಲಂ ವೀರಭಧ್ರಪ್ಪ ಅವರನ್ನು ಮೇಲುಸ್ತುವಾರಿಯಾಗಿ ನೇಮಕ ಮಾಡಿದೆ. 
 
ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಾಗಿ 9 ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
 
ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಕ್ಕೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಉಸ್ತುವಾರಿಯಾಗಿ, ಸಚಿವ ಎಂ.ಬಿ.ಪಾಟೀಲ್‌ಗೆ ಮೇಲುಸ್ತುವಾರಿಯಾಗಿ ನೇಮಕ ಮಾಡಲಾಗಿದೆ 
 
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಾಗಿ 9 ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಒಟ್ಟು 18 ಸಚಿವರನ್ನು ಎರಡೂ ಕ್ಷೇತ್ರಗಳಿಗೆ ಉಸ್ತುವಾರಿ ಹೊಣೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆ ಹತ್ಯೆಗೆ ಯತ್ನ