ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ಪಕ್ಷಕ್ಕೆ ಸೇರಿದ್ದವು ಎನ್ನಲಾದ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಹಣ ಹಂಚಿಕೆಗೆ ಬಳಕೆಯಾಗುತ್ತಿದ್ದ ಕಾರುಗಳ ಮೇಲೆ ಕಲ್ಲು ತೂರಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಎರಡು ಕಾರ್ ಗಳ ಗ್ಲಾಸ್ ಪುಡಿ ಪುಡಿಯಾಗಿವೆ.
ಕೆ ಆರ್ ಪೇಟೆ ಉಪ ಚುನಾವಣೆಗೆ ಕ್ಷಣಗಣನೆ ಶುರು ಆಗಿರುವಾಗ ಈ ಘಟನೆಯು ಮಂಡ್ಯದ ಮಂದಗೆರೆ ಗ್ರಾಮದಲ್ಲಿ ನಡೆದಿದೆ.
ಹಳ್ಳಿ ಹಳ್ಳಿಗಳಿಗೆ ತೆರಳಿ ಪಕ್ಷದಿಂದ ಹಣ ಹಂಚಿಕೆ ಮಾಡಲಾಗುತ್ತಿತ್ತು ಎಂಬ ದೂರು ಕೇಳಿಬಂದಿದೆ. ಶಿಪ್ಟ್, ಬೊಲೇರೋ ಕಾರುಗಳ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಗ್ರಾಮಸ್ಥರು.