ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಚೋರರು ಎಗರಿಸಿದ್ದಾರೆ ಎಂದು ಶಾಸಕ ಯೋಗೇಶ್ವರ್ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹ್ಯಾಕರ್‌ಗಳು ಶಾಸಕ ಯೋಗೇಶ್ವರ್ ಖಾತೆ ಹ್ಯಾಕ್ ಮಾಡಿ 1.90 ಲಕ್ಷ ರೂಪಾಯಿ ಹಣವನ್ನು ಎಗರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್‌ಕಳ್ಳರು ಹಣವನ್ನು ಲಪಟಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಬರ್‌ಕಳ್ಳರು ಮಾರ್ಚ್ 18 ರಂದು ಶಾಸಕ ಯೋಗೇಶ್ವರ್ ಖಾತೆಯನ್ನು ಹ್ಯಾಕ್ ಮಾಡಿ ಮುಂಬೈ, ಪುಣೆಯಿಂದ ಹಣ ಪಡೆದಿದ್ದಾರೆ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ.
ಸೈಬರ್ ಅಪರಾಧ ವಿಭಾಗದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.