ಇತ್ತೀಚಿನ ಕೆಲ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತಿರುವ ಶಾಸಕ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ನಾಯಕರ ಋುಣ ನನ್ನ ಮೇಲಿಲ್ಲ. ಕ್ಷೇತ್ರದ ಜನತೆಯ ಋುಣ ನನ್ನ ಮೇಲಿದೆ ಎಂದು ತಮ್ಮದೇ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅನಗತ್ಯವಾಗಿ ತಮ್ಮ ರಾಜಕೀಯ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
ನಿನ್ನೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಸಿ.ಪಿ.ಯೋಗೇಶ್ವರ್ ಸಹೋದರ ಸಿ.ಪಿ.ರಾಜೇಶ್‌ಗೆ ಇಂದು ಸಂಜೆಯೊಳಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಫರ್ಮಾನ್ ಹೊರಡಿಸಿದ್ದರು.
ಸಹೋದರ ಸಿ.ಪಿ.ರಾಜೇಶ್‌ಗೆ ರಾಜೀನಾಮೆ ನೀಡುವಂತೆ ಸೂಚಿಸಿರುವ ಡಿಕೆಶಿ ವರ್ತನೆಯಿಂದ ಆಕ್ರೋಶಗೊಂಡಿರುವ ಯೋಗೇಶ್ವರ್,ಕೈ ನಾಯಕರ ವಿರುದ್ಧ ಗರಂ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.