Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ನೀಡಿದರು. ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ನಲ್ಲಿ ಅಕ್ರಮ ಆಸ್ತಿ ಮಾಡಿಕೊಂಡಿದ್ದಾರೆ ಇದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿಳಿಸಿದರು.ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಎಸ್.ಸಿ ಮೋರ್ಚಾಗಳ ಪದಾಧಿಕಾರಿಗಳ ಜೊತೆ ಸಂವಾದ ಸಭೆ ನಡೆಸಿದ ಅವರು, ಡಿಕೆಶಿ ಜೈಲಿಗೆ ಹೋಗಿದ್ದು ಬಿಜೆಪಿಗೆ ಬಂದಿಲ್ಲ ಎಂದಲ್ಲ. ಬದಲಿಗೆ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್, ಎಫ್‌ಐಆರ್ ಹಾಕಲಾಗಿದೆ. ಇದರಿಂದಾಗಿ ಜೈಲಿಗೆ ಹೋಗಿದ್ದಾರೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.