ಮುಂಗಾರು ಅಧಿವೇಶನ ಮುಕ್ತಾಯವಾದ ಕೂಡಲೇ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಂಬರುವ ಜೂನ್ 16 ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜೂನ್ 16 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಬಲ್ಲ ಮೂಲಗಳ ಪ್ರಕಾರ, ಜೂನ್ 18 ಅಥವಾ 19 ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಬಹುತೇಕ ಜೂನ್ 20 ರೊಳಗೆ ಸಚಿವ ಸಂಪುಟ ವಿಸ್ತರಣೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯನವರಿಗೆ ಸಚಿವ ಸ್ಥಾನ ನೀಡುವಂತೆ ರಾಜಕೀಯ ಪ್ರಭಾವ ಬಳಸುತ್ತಿದ್ದಾರೆ ಎನ್ನಲಾಗಿದೆ. ಕೆಲವರು ದೆಹಲಿ ಹೈಕಮಾಂಡ್ನಲ್ಲಿರುವ ಗಾಡ್ಫಾದರ್ಗಳ ಮೂಲಕ ಸಚಿವ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.