ಬೆಂಗಳೂರು : ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಕುರಿತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.
ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾಕ್ಕೆ ನಿಷೇಧ ಹೇರಿರುವುದಾಗಿ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.
ಇದೀಗ ಈ ಆದೇಶವನ್ನು ಖಂಡಿಸಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ಮಾಧ್ಯಮಗಳ ಕ್ಯಾಮರಕ್ಕೆ ಅವಕಾಶ ನೀಡಲು ಆಗ್ರಹಿಸಿದ್ದಾರೆ.