ಪ್ರಗತಿಪರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು.
ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶಂಕರಪುರ ಭಾಗ ಜುಲೈ 16ರಂದು ಶ್ರೀ ಗುರು ಪೂಜಾ ಉತ್ಸವವನ್ನು ಆಯೋಜನೆ ಮಾಡಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ ಎಂದೂ, ಅಖಿಲ ಭಾರತ ಗ್ರಾಮ ವಿಕಾಸ ಸಂಯೋಜಕ ಶ್ರೀಗುರುರಾಜ್ ಅಂದಿನ ಸಮಾರಂಭದಲ್ಲಿ ಭಾಗಿಯಾಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿತ್ತು. ಈ ಆಹ್ವಾನ ಪತ್ರಿಕೆ ವೈರಲ್ ಆಗಿತ್ತು.
ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ಬದಲಾಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದರೆ, ಇನ್ನೂ ಕೆಲವರು ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಜೊತೆ ಗುರುತಿಸಿಕೊಂಡು ತುಂಬಾ ದಿನವಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದರು. ನಾಗ್ತಿ ಮೇಷ್ಟ್ರ ಮೇಲೆ ನೆಗೆಟಿವ್ ಕಾಮೆಂಟ್ ಬಂದಿದ್ದೇ ಹೆಚ್ಚಿತ್ತು. ಹಾಗಾಗಿ ನಾಗತಿಹಳ್ಳಿಯವರು ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.