ಎಲ್ಲಾ ಹಂತದ ಕೇಂದ್ರ ಸರ್ಕಾರಿ ನೌಕರರ ವರ್ಕ್ ಫ್ರಂ ಹೋಂ ಅವಧಿಯನ್ನು ರದ್ದುಗೊಳಿಸಲಾಗಿದ್ದು, ಇಂದಿನಿಂದ ಎಲ್ಲಾ ನೌಕರರು ಕಚೇರಿಗೆ ತೆರಳುವಂತೆ ಸೂಚಿಸಲಾಗಿದೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಪೂರ್ಣಪ್ರಮಾಣದಲ್ಲಿ ಹಾಜರಾಗುವಂತೆ ಸೂಚಿಸಲಾಗಿದೆ.
ಎಲ್ಲಾ ಕಚೇರಿಗಳಲ್ಲೂ ಮುಖ್ಯಸ್ಥರು, ನೌಕರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಜ.31ರಿಂದ ಫೆ.15ರವರೆಗೆ ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕಡಿಮೆ ಇರುವ ಶೇ.50ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ ನೀಡಲಾಗಿತ್ತು, ಆದರೆ ಭಾನುವಾರ ಈ ಬಗ್ಗೆ ಸಭೆ ನಡೆಸಿ ಇಂದಿನಿಂದಲೇ ಕಚೇರಿಯಲ್ಲಿ ಶೇ.100ರಷ್ಟು ನೌಕರರ ಹಾಜರಾತಿಯನ್ನು ಕಡ್ಡಾಯಗೊಳಿಸಿ ನಿರ್ಧಾರ ಕೈಗೊಳ್ಳಲಾಗಿದೆ.