Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಾಜಿ ಸಚಿವ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತವಾಗಿದೆ. ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿ ಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗನ್ ಮ್ಯಾನ್ ಹಾಗೂ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ.