ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವ ಆರೋಪದ ಮೇರೆಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳ ಮೇಲೆ ವಿನಕಾರಣ ಹೇಳಿಕೆ ನೀಡಿ ಅವರ ದಕ್ಷತೆ ಹಾಗೂ ಪ್ರಾಮಾಣಿಕತೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುವ ಮೂಲಕ ಸಂಸದರು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕರ್ನಾಟಕ ಅಂತರ್ಜಾಲ ಪ್ರಾಧಿಕಾರದ ಎ ಆನಂದ ದೂರಿನಲ್ಲಿ ಆರೋಪಿಸಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ನೈಜವಲ್ಲದ ಪೋಸ್ಟ್ ಗಳನ್ನು ಫೇಸ್‍ಬುಕ್ ನಲ್ಲಿ ಹಾಕಿ ಪ್ರಚೋದನೆ ನೀಡುತ್ತಿದ್ದು ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.