ಕಾವೇರಿ ಮೇಲುಸ್ತುವಾರಿ ಸಭೆ ನವದೆಹಲಿಯಲ್ಲಿ ನಡೆಯಲಿರುವುದರಿಂದ ಇಂದು ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯವಾಗಿ ಸುಪ್ರೀಂ ಕೋರ್ಟ್ ಆದೇಶದ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿದ್ದು, ಅಷ್ಟೇ ಅಲ್ಲದೇ ಸೆ.20ರ ನಂತರ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಬೇಕೇ ಆಥವಾ ಬೇಡವೇ ಎನ್ನುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ