ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನನಗೇನು ಹುಚ್ಚಾ? ಪ್ರಕರಣ ಗಂಭೀರತೆ ಪಡೆದಿರುವುದರಿಂದ ನಾನು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಸುಪ್ರೀಂ ಆದೇಶವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕೈತಪ್ಪಿದರಿಂದ ಬೇಸರಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಜೆಡಿಎಸ್ ಪಕ್ಷಕ್ಕೆ ಬರುವುದು ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ