Publish Date: Fri, 22 Sep 2023 (14:00 IST)
Updated Date: Fri, 22 Sep 2023 (13:25 IST)
ಇಂದು ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧವಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದೆ.ಬೆಂಗಳೂರಿನ 28ವಿಧಾನ ಸಭಾ ಕ್ಷೇತ್ರದಲ್ಲಿ ಕರವೆಯಿಂದ ಪ್ರತಿಭಟನೆ ನಡೆಸಲಾಗಿದೆ.ಸ್ಥಳೀಯ ಹಂತದ ಕರವೆ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಬೆಂಗಳೂರು ನೀರು ಸರಬರಾಜು ಮಂಡಳಿ ಮುಂದೆ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆತೊರಕಾಡನ ಹಳ್ಳಿಯ ಬೆಂಗಳೂರು ನೀರು ಸರಬರಾಜು ಕಚೇರಿ ಮಂಬಾಗ ತಮಿಳು ನಾಡಿಗೆ ನೀರು ಬಿಟ್ಟಿರುವ ಹಿನ್ನೆಲೆ ಕನ್ನಡಿಗರ ಆಕ್ರೋಶ ಹೊರಹಾಕಿದ್ದಾರೆ.ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದದಿಂದ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು ಬೀದಿಗಳಿದು ಧರಣಿ ನಡೆಸಿದ್ದಾರೆ.ನಾಯಂಡನಹಳ್ಲಿ ಸಿಗ್ನಲ್ ಬಳಿ ರಸ್ತೆ ತಡೆದು ಕರವೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ನೂರಾರು ಕರವೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು,ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ