Publish Date: Tue, 17 Oct 2017 (09:23 IST)
Updated Date: Tue, 17 Oct 2017 (09:24 IST)
ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ತಲಕಾವೇರಿಯಲ್ಲಿ ಕ್ಷಣಗಣನೆ ಪ್ರಾರಂಭವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವವಾಗುವ ವಿಸ್ಮಯವನ್ನು ನೋಡಲು ಸಾವಿರಾರು ಭಕ್ತರು ತಲಕಾವೇರಿಗೆ ಬಂದಿಳಿದಿದ್ದಾರೆ.
ಇಂದು ಮಧ್ಯಾಹ್ನ 12.33 ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಸಾವಿರಾರು ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ತೊಂದರೆಗಳಾಗದಂತೆ ಸಕಲ ವ್ಯವಸ್ಥೆ ಮಾಡಲಾಗಿದೆ.
ಸೂರ್ಯನು ತುಲಾರಾಶಿಗೆ ಪ್ರವೇಶಿಸುವ ದಿನ ಪ್ರತೀ ವರ್ಷವೂ ನಡೆಯುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ