ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಇಂದು ಕರ್ನಾಟಕ ರಾಜ್ಯ ಮತ್ತೊಂದು ಅಗ್ನಿಪರೀಕ್ಷೆ ಎದುರಿಸಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರು ಹಂಚಿಕೆ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ
ಕಾವೇರಿ ನದಿಯಿಂದ ತಮಿಳುನಾಡಿಗೆ 10 ದಿನಗಳ ಕಾಲ ಮೂರು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ನಿನ್ನೆ ರಾಜ್ಯಕ್ಕೆ ಸೂಚನೆ ನೀಡಿತ್ತು.
ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ರಾಜ್ಯಕ್ಕೆ ಅತಿ ಮಹತ್ವದಾಗಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಪ್ರಶ್ನಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ