Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

'ಕಾವೇರಿ'ದ ಸಂಕಟ: ನಾಳೆ ಮತ್ತೆ ಸರ್ವಪಕ್ಷ ಸಭೆ....

'ಕಾವೇರಿ'ದ ಸಂಕಟ: ನಾಳೆ ಮತ್ತೆ ಸರ್ವಪಕ್ಷ ಸಭೆ....
ಬೆಂಗಳೂರು , ಮಂಗಳವಾರ, 27 ಸೆಪ್ಟಂಬರ್ 2016 (19:11 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಸರ್ವಪಕ್ಷ ಸಭೆ ಕರೆಯಲಾಗಿದೆ. 
 
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾಳೆ ಮುಂಜಾನೆ 9.30 ಕ್ಕೆ ಸರ್ವಪಕ್ಷ ಸಭೆ ನಡೆಯಲಿದೆ. 
 
ಈ ಮಹತ್ವದ ಸರ್ವಪಕ್ಷ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಕುರಿತು ಚರ್ಚೆ ನಡೆಯಲಿದ್ದು, ಸಂಸದರು, ವಿಧಾನಮಂಡಲದ ಉಭಯ ಸದನ ನಾಯಕರು, ಕಾವೇರಿ ಜಲಾಯನ ಪ್ರದೇಶದ ಶಾಸಕರು ಹಾಗೂ ಉಸ್ತುವಾರಿ ಸಚಿವರು  ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಎರಡು ದಿನಗಳ ಅವಧಿಯಲ್ಲಿ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್‌ನ್ನು ಉಗ್ರ ರಾಷ್ಟ್ರವೆಂದು ಘೋಷಿಸಲು ವಿಶೇಷ ಅಧಿವೇಶನ: ಕಾಂಗ್ರೆಸ್