Webdunia - Bharat's app for daily news and videos

Install App

CBI ಮತ್ತು ED ನಿರ್ದೇಶಕರ ಅಧಿಕಾರಾವಧಿ 5 ವರ್ಷ ವಿಸ್ತರಣೆ: ಖಂಡನೆ

Webdunia
ಮಂಗಳವಾರ, 16 ನವೆಂಬರ್ 2021 (20:43 IST)
ಸಿಬಿಐ ನಿರ್ದೇಶಕ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸಬಹುದು ಎಂಬ ಎರಡು ಸುಗ್ರೀವಾಜ್ಞೆಗಳನ್ನು ಇಂದು ರಾಷ್ಟ್ರಪತಿಗಳ ಮೂಲಕ ಸರ್ಕಾರ ಹೊರಡಿಸಿದೆ.
ಇದುವರೆಗೂ ಈ ಎರಡೂ ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರವಧಿ ಎರಡು ವರ್ಷ ಇತ್ತು. 2018 ರಲ್ಲಿ ಅಧಿಕಾರ ವಹಿಸಿಕೊಂಡ ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಎಸ್‌ಕೆ ಮಿಶ್ರಾ ಅವರ ವಿಸ್ತರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ಎಲ್‌ಎನ್ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಅಧಿಕಾರಾವಧಿಯ ವಿಸ್ತರಣೆಯನ್ನು “ಅಪರೂಪದ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಮಾಡಬೇಕು” ಎಂದು ಹೇಳಿತ್ತು. ಇದರ ಆಧಾರದಲ್ಲಿಯೇ ಕಳೆದ ವರ್ಷ ಅವರ ಅಧಿಕಾರವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು.
ಇದೇ ನವೆಂಬರ್ 17ಕ್ಕೆ ಇಡ ಮುಖ್ಯಸ್ಥರ ಅಧಿಕಾರವಧಿ ಮುಗಿಯುತ್ತಿರುವುದರ ಹಿನ್ನೆಲೆಯಲ್ಲಿ 5 ವರ್ಷಗಳವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ.
ಜಾರಿ ನಿರ್ದೇಶನಾಲಯ ಕಂದಾಯ ಇಲಾಖೆ, ಹಣಕಾಸು ಸಚಿವಾಲಯದ ಅಡಿಯಲ್ಲಿನ ವಿಶೇಷ ಹಣಕಾಸು ತನಿಖಾ ಸಂಸ್ಥೆಯಾಗಿದ್ದು, ವಿದೇಶಿ ವಿನಿಮಯ ಕಾನೂನುಗಳು ಮತ್ತು ನಿಯಮಗಳು ಮತ್ತು ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ಮಾಡುತ್ತದೆ.
ಕೇಂದ್ರ ಸರ್ಕಾರದ ಈ ನಡೆಯನ್ನು ಹಲವಾರು ಜನರು ವಿರೋಧಿಸಿದ್ದಾರೆ. “ಆಘಾತಕಾರಿ ಮತ್ತು ಅಸಹ್ಯಕರ! ಸಿಬಿಐ ಮತ್ತು ಇಡಿ ಸ್ವಾತಂತ್ರ್ಯವನ್ನು ಮತ್ತಷ್ಟು ಹಾಳುಮಾಡುವ ಪ್ರಯತ್ನವಿದು” ಎಂದು ಸುಪ್ರೀಂ ಕೋರ್ಟ್ ವಕೀಲರಾದ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ.
“ತಮ್ಮ ಅನುಕೂಲಕ್ಕಾಗಿ ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳಿಗೆ ವಿಸ್ತರಿಸಲು ಸುಗ್ರೀವಾಜ್ಞೆ ತರಲಾಗಿದೆ. ಮುಂದೆ ಪ್ರಧಾನಿ ಅಧಿಕಾರಾವಧಿಯನ್ನು 10 ವರ್ಷಕ್ಕೆ ವಿಸ್ತರಿಸಲು ಹೊಸ ಕಾನೂನು ತರುತ್ತಾರೆಯೇ? ಪ್ರಜಾಸತ್ತಾತ್ಮಕ ಭಾರತ ನಿರ್ಮಿಸಿದ ಪ್ರತಿಯೊಂದು ಸಂಸ್ಥೆಯನ್ನು ಮೋದಿ ನಿರ್ಲಜ್ಜವಾಗಿ ಮುಗಿಸುತ್ತಿದ್ದಾರೆ. ಬಿಜೆಪಿ + ಆರೆಸ್ಸೆಸ್ + EC + CBI + IT + ED ಯ ಮಹಾಘಟಬಂಧನ್ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments