Daily Horoscope
✕

ಸಿಬಿಐಗೆ ಮಾಡಲು ದೊಡ್ಡ ಕೆಲಸಗಳಿವೆ - ಡಿಕೆಶಿ

Webdunia
ಗುರುವಾರ, 9 ಫೆಬ್ರವರಿ 2023 (18:25 IST)
CBIಗೆ ಮಾಡಲು ದೊಡ್ಡ ದೊಡ್ಡ ಕೆಲಸಗಳು ಇರುತ್ತವೆ. ಅವುಗಳನ್ನು ಮೊದಲು ಮಾಡುವಂತೆ ತಾನು ಸಿಬಿಐಗೆ ಸಲಹೆ ನೀಡುವುದಾಗಿ ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಇಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಮಾಜಿ ಸಚಿವರು, ತನ್ನ ಮಗಳಿಗೆ ಸಿಬಿಐನಿಂದ ನೋಟೀಸ್ ಬಂದಿರುವ ವಿಚಾರ ಪ್ರಸ್ತಾಪಿಸುತ್ತಾ ಈ ಮೇಲಿನ ಮಾತುಗಳನ್ನು ಹೇಳಿದರು. ನನ್ನ ಮಗಳಿಗೆ ಸಿಬಿಐನಿಂದ ನೋಟೀಸ್ ಬಂದಿದೆ. ಆಕೆಯ ಶಿಕ್ಷಣ ಶುಲ್ಕದ ಬಗ್ಗೆ ಅವರಿಗೆ ಮಾಹಿತಿ ಬೇಕಂತೆ. ಈ CBIನವರಿಗೆ ಮಾಡಲು ದೊಡ್ಡ ದೊಡ್ಡ ಕೆಲಸಗಳು ಇವೆ. ಆ ದೊಡ್ಡ ಕೆಲಸಗಳನ್ನು ಮಾಡುವಂತೆ ಸಿಬಿಐಗೆ ಸಲಹೆ ನೀಡಿ ಪತ್ರ ಬರೆಯುತ್ತೇನೆ ಎಂದು ಡಿಕೆಶಿ ತಿಳಿಸಿದರು. ಇದೇ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಕೇಂದ್ರ ಸರ್ಕಾರ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು. ಇದೇ ವೇಳೆ, ತನಗೆ ಜಾರಿ ನಿರ್ದೇಶನಾಲಯದಿಂದ ನೋಟೀಸ್ ಬಂದಿರುವ ವಿಚಾರವನ್ನೂ ಅವರು ಖಚಿತಪಡಿಸಿದರು. ಇಡಿ ನೋಟೀಸ್ ಬಂದಿದೆ. ಫೆಬ್ರವರಿ 22ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭದ್ರತಾ ಸಿಬ್ಬಂದಿ ಎಷ್ಟು ಜಾಗೃತರಾಗಿರುತ್ತಾರೆ ನೋಡಿ: ಸಂಶಯಾಸ್ಪದ ವ್ಯಕ್ತಿಯನ್ನು ಚೇಸ್ ಮಾಡಿ ಹಿಡಿದ ರೋಚಕ ಕ್ಷಣ Video

ಇಂಥವರಿಗೆ ಮಕ್ಕಳು ಯಾಕೆ ಬೇಕು.. ರೀಲ್ಸ್ ಹುಚ್ಚಿಗೆ ದಂಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ತಪರಾಕಿ Video

ಅಲ್ಬೇನಿಯಾದಲ್ಲಿ ಸುಪ್ರೀಂಕೋರ್ಟ್ ಗೆ ಬೆಂಕಿ ಹಚ್ಚಿದ್ದಾರೆ, ನಮ್ಮವರೂ ಕಲಿಯಬೇಕು ಎಂದ ಸಂಜಯ್ ರಾವತ್ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಬ್ಬು ಬೆಳೆಗಾರರಿಗೆ ನ್ಯಾಯ ನೀಡಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments