ಉತ್ತರಪ್ರದೇಶ ಸರಕಾರ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ತನಿಖೆಗೆ ಅಗತ್ಯವಾದ ಸಹಕಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇ ಸೂಕ್ತ ತನಿಖೆ ಮಾಡಿ ಎಂದು ಹೇಳಿದ್ದೇವು. ಇದೀಗ ಸಿಬಿಐ ತನಿಖೆಗೆ ಕೊಟ್ಟಿರುವುದು ಸ್ವಾಗತಾರ್ಹ. ಉತ್ತರಪ್ರದೇಶ ಸರಕಾರದ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ದಕ್ಷ ಅಧಿಕಾರಿಯಾಗಿದ್ದು, ರಾಜ್ಯ ಒಬ್ಬ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದೆ. ಸಿಬಿಐ ತನಿಖೆಯಿಂದ ಸತ್ಯ ಸಂಗತಿ ಹೊರಬರಲಿ ಎಂದರು.
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪೋಷಕರು ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.