Webdunia - Bharat's app for daily news and videos

Install App

ಪೊಲಿಸರ ಮಕ್ಕಳಿಗೆ ಸಿಬಿಎಸ್ಇ ಶಾಲೆ

Webdunia
ಶನಿವಾರ, 28 ಜನವರಿ 2017 (15:00 IST)
ಪೊಲೀಸ್ ಇಲಾಖೆ ದಕ್ಷತೆಯಿಂದ ಕೆಲಸ ಮಾಡಬೇಕು ಎಂಬ ಹಿನ್ನೆಲೆಯಲ್ಲಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
 
ಹೆಚ್ಚುವರಿ 200 ಗಸ್ತುವಾಹನ: ಸುಮಾರು 300 ವಾಹನಗಳನ್ನು ಗಸ್ತು ತಿರುಗುವ ಪೊಲೀಸರಿಗೆ ನೀಡಲಾಗಿದೆ. ಹೆದ್ದಾರಿ ಗಸ್ತಿಗೆ 100 ಇನ್ನೋವಾ ವಾಹನಗಳನ್ನು ಕೊಡಲಾಗಿದೆ. ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವಾಗಲು, ಅಪರಾಧಗಳನ್ನು ನಿಯಂತ್ರಿಸಲು ವೇಗ ಹೊಂದಿರುವ ವಾಹನಗಳ ಅಗತ್ಯವಿದೆ ಎಂಬುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 200 ವಾಹನಗಳನ್ನು ಸಧ್ಯವೇ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
 
ಪೊಲಿಸ್ ಮಕ್ಕಳಿಗೆ ಸಿಬಿಎಸ್ ಇ ಶಾಲೆ: ಕೆಎಸ್ ಆರ್ ಪಿ ಸಿಬ್ಬಂದಿ ದೂರದ ಊರುಗಳಿಗೆ ಸಂಚರಿಸುತ್ತಾರೆ. ಅವರಿಗೆ ಈಗ ಒದಗಿಸಿರುವ ವಾಹನಗಳಿಂದ ಅನುಕೂಲವಾಗುತ್ತದೆ ಎಂದು ಹೇಳಿದ ಮುಖ್ಯಮಂತ್ರಿಗಳು ಮಹಿಳಾ ಪೊಲೀಸರಿಗೆ ಶೌಚಾಲಯ ಸೌಲಭ್ಯ ಹೊಂದಿರುವ ವಾಹನಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
 
ಪೊಲೀಸ್ ಇಲಾಖೆಗೆ ನಮ್ಮ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸಿದೆ. ಕ್ಯಾಂಟೀನ್, ಆರೋಗ್ಯ ತಪಾಸಣೆಗೆ ಸಾವಿರ ರೂ. ನೀಡಲಾಗುತ್ತಿದೆ. ಪೊಲೀಸರ ಮಕ್ಕಳಿಗೆ ಸಿಬಿಎಸ್ ಸಿ ಗುಣಮಟ್ಟದ ಶಾಲೆ ಗಳನ್ನು ಬೆಂಗಳೂರು, ಮೈಸೂರಿನಲ್ಲಿ ತೆರೆಯಲಾಗಿದೆ. ಅದನ್ನು ಎಲ್ಲ ವಲಯಗಳಿಗೆ ವಿಸ್ತರಿಸಲಾಗುವುದು. ಸಿಬ್ಬಂದಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳ ಭತ್ಯೆ ನೀಡಲಾಗುತ್ತಿದೆ. ಬಡ್ತಿ ಅವಕಾಶ ಸಿಗುವಂತೆಯೂ ನೋಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
 
ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿ
ಜನರ ನಿರೀಕ್ಷೆಗೆ ತಕ್ಕಂತೆ ಪೊಲೀಸ್ ಇಲಾಖೆ ಕೆಲಸ ಮಾಡಬೇಕು. ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಅಪರಾಧಗಳನ್ನು ನಿಯಂತ್ರಣ ಮಾಡಬೇಕು. ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೂ ಅಪರಾಧಗಳನ್ನು ನಿಯಂತ್ರಿಸಿ, ಕಾನೂನು ಬಗ್ಗೆ ಜನರಲ್ಲಿ ಗೌರವ ಬರುವಂತ ಕೆಲಸವನ್ನು ಪೊಲೀಸರು ಮಾಡಬೇಕು. ದಕ್ಷತೆಯಿಂದ ಕೆಲಸ ಮಾಡಲು ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದೆಯೂ ಒದಗಿಸಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಜನರ ನಿರೀಕ್ಷೆಗೆ ತಕ್ಕಂತೆ ಪೊಲೀಸರು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments