Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ

ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ
bangalore , ಗುರುವಾರ, 30 ನವೆಂಬರ್ 2023 (13:40 IST)
ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಕಲಿ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
 
ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆ  ಸಿಸಿಬಿ ಸೀಜ್ ಮಾಡಿದ್ದಾರೆ.ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮವಾಗಿ  ಮಾರಾಟಮಾಡ್ತಿದ್ರು.
 
ಪಟೆಲ್ ಎಕ್ಸ್ಪೋರ್ಟ್ ಹಾಗೂ ಆರ್ ಬಿ ಫ್ಯಾಷನ್ ಗೋಡೌನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು,ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆ ವೇಳೆ ಬೇರೆ ಬೇರೆ ಕಡೆಯೂ ಇದೇ ರೀತಿ ಫೇಕ್ ಬ್ರಾಂಡ್ ಗೋಡೌನ್ ಹೊಂದಿರೋದು ಬೆಳಕಿಗೆ ಬಂದಿದೆ.ಎಸ್ ಆರ್ ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ನಕಲಿ ಬ್ರಾಂಡ್ ಬಟ್ಟೆಯ ಗೋಡೌನ್ ಇರೋದು ಬೆಳಕಿಗೆ ಬಂದಿದೆ.ಸದ್ಯ ಪ್ರಕರಣ ದಾಖಲಿಸಿಕೊಂಡು ಸಿಸಿಬಿ ಟೀಂ ತನಿಖೆ ಶುರುಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಆರೋಗ್ಯದ ಗುಟ್ಟು ರಟ್ಟು