Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯ ಮೇಲೆ ಸಿಸಿಬಿ ದಾಳಿ

ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯ ಮೇಲೆ ಸಿಸಿಬಿ ದಾಳಿ
ಬೆಂಗಳೂರು , ಬುಧವಾರ, 11 ಡಿಸೆಂಬರ್ 2019 (11:16 IST)
ಬೆಂಗಳೂರು : ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಯುತ್ತಿದ್ದ ಮಹಾಲಕ್ಷ್ಮೀ ಲೇಔಟ್  ಶ್ರೀ ವೆಂಕಟೇಶ್ವರ ಇನ್ ಸ್ಟಿಟ್ಯೂಟ್  ನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.



ಆಂಧ್ರ ಮೂಲದ ಶ್ರೀನಿವಾಸ್ ರೆಡ್ಡಿಗೆ ಸೇರಿದ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು, ಹಣ ನೀಡಿದ್ರೆ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತ್ತಿದ್ದರು. ಈ ಮೂಲಕ ಆರೋಪಿಗಳು ಲಕ್ಷಾಂತರ ಹಣ ವಸೂಲಿ ಮಾಡುತ್ತಿದ್ದರು.


ಇದೀಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡಕ್ಕೆ ಸಾವಿರಾರು ನಕಲಿ  ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್   ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಸಿಗುವುದು ಡೌಟ್!