Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ
bangalore , ಶುಕ್ರವಾರ, 27 ಜನವರಿ 2023 (19:15 IST)
ರಾಜ್ಯ, ಹೊರರಾಜ್ಯದ ವಿವಿಧ ಯೂನಿವರ್ಸಿಟಿಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ರಾಜಾಜಿ ನಗರದ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಭದ್ರಪ್ಪ ಲೇಔಟಿನ ಆರೋಹಿ ಇನ್ಸ್ಟಿಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜ್ ಹಾಗೂ ವಿಜಯನಗರದ ಬೆನಕಾ ಕರೆಸ್ಪಾಡೆನ್ಸ್ ಕಾಲೇಜ್‌ ಮೇಲೆ ದಾಳಿ ನಡೆಸಲಾಗಿದ್ದು ವಿಕಾಸ್ ಭಾಗವತ್ ಎಂಬಾತನನ್ನ ಬಂಧಿಸಲಾಗಿದೆ.
ಈ ಹಿಂದೆ ನಕಲಿ ಅಂಕಪಟ್ಟಿ ಜಾಲದ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಆರೋಪಿಗಳ ಮಾಹಿತಿಯನ್ವಯ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಅದರನ್ವಯ ಐದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಸಂದರ್ಭದಲ್ಲಿ ಆರೋಪಿತ ಸಂಸ್ಥೆಗಳ ಬಳಿ ಅಣ್ಣಾಮಲೈ ಯೂನಿವರ್ಸಿಟಿ, ಸಿಕ್ಕಿಂ ಯೂನಿವರ್ಸಿಟಿ, ಗೀತಂ ಯೂನಿವರ್ಸಿಟಿ, ಕುವೆಂಪು ಯೂನಿವರ್ಸಿಟಿ, ಜೈನ್ ವಿಹಾರ್ ಯೂನಿವರ್ಸಿಟಿ, ಮಂಗಳೂರು ಯೂನಿವರ್ಸಿಟಿ, ಬೆಂಗಳೂರು ಯೂನಿವರ್ಸಿಟಿ ಸೇರಿದಂತೆ ಹದಿನೈದು ವಿವಿಧ ಯೂನಿವರ್ಸಿಟಿಗಳ 6846 ನಕಲಿ ಅಂಕಪಟ್ಟಿಗಳು ಪತ್ತೆಯಾಗಿವೆ. ಆಯಾ ಯೂನಿವರ್ಸಿಟಿಗಳಿಗೆ ಅಂಕಪಟ್ಟಿಗಳನ್ನ ಕಳುಹಿಸಿ ಅವುಗಳು ನಕಲಿ ಎಂಬ ಮಾಹಿತಿ ಪಡೆದಿರುವ ಸಿಸಿಬಿ ಪೊಲೀಸರು, ಆರೋಪಿ ಸಂಸ್ಥೆಗಳ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.
 
ಯಾರಿಗೂ ನೀಡದೇ ಹಳೆಯ ವರ್ಷಗಳ ಅಂಕಪಟ್ಟಿಗಳೂ ಸಹ ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ನಕಲಿ ಅಂಕಪಟ್ಟಿಗಳನ್ನ ಬಳಸಿ ಕೆಲವರು ಹುದ್ದೆ, ಮುಂಬಡ್ತಿ ಸಹ ಪಡೆದಿರಬಹುದಾದ ಸಾಧ್ಯತೆಯಿದ್ದು ತನಿಖೆ ನಡೆಸಲಾಗುತ್ತಿದೆ. ಇಂಥಹ ಯಾವುದೇ ಶಿಕ್ಷಣ ಸಂಸ್ಥೆಗಳ ಕುರಿತು ಮಾಹಿತಿಯಿದ್ದರೆ ತಿಳಿಸುವಂತೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.ಸದ್ಯ ಆರೋಪಿತ ಸಂಸ್ಥೆಗಳ ಬಳಿಯಿದ್ದ 22 ಲ್ಯಾಪ್‌ಟಾಪ್‌ಗಳು, 1 ಪ್ರಿಂಟರ್, 13 ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆಯಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ದಾಖಲು- ತನಿಖೆ ನಡೆಸುತ್ತಿರುವ ಪೊಲೀಸರು