Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಮನೆಯೊಂದ್ರಲ್ಲಿ ಪ್ರತಿಷ್ಠಿತ ವಿವಿಗಳ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ಮಾಡಲಾಗ್ತಿತ್ತು. ಈ ದಂಧೆಯನ್ನು CCB ಪೊಲೀಸರು ಭೇದಿಸಿದ್ದಾರೆ. ದೇಶದ 29 ಯೂನಿವರ್ಸಿಟಿಗಳ ಮಾರ್ಕ್ಸ್ ಕಾರ್ಡ್ ನಕಲಿ ಮಾಡಿ ಮಾರಾಟ ಮಾಡಲಾಗ್ತಿತ್ತು. ಈ ಪ್ರಕರಣದ ಬೆನ್ನತ್ತಿದ್ದ CCB, ಇಬ್ಬರು ಮಹಿಳೆಯರು ಸೇರಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 1500ಕ್ಕೂ ಅಧಿಕ ನಕಲಿ ಮಾರ್ಕ್ಸ್ ಕಾರ್ಡ್, 80 ನಕಲಿ ಸೀಲ್, 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಓಪನ್ ಯೂನಿವರ್ಸಿಟಿ, ಪಿಯು ಬೋರ್ಡ್, ಉತ್ತರ ಪ್ರದೇಶದ C.V. ರಾಮನ್ ಯೂನಿವರ್ಸಿಟಿ, ಮೇಘಾಲಯದ ವಿಲಿಯಂ ಕ್ಯಾರಿ ಯೂನಿವರ್ಸಿಟಿ ಸೇರಿ 29ಕ್ಕೂ ಯೂನಿರ್ವಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ಗಳನ್ನ ನಕಲಿಯಾಗಿ ಸೃಷ್ಟಿಸಿ ಮಾರಾಟ ಮಾಡಲಾಗ್ತಿತ್ತು. CCB ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.