Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಎಂಟಿಸಿ ಬಸ್ಸಿನ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಯಾಣಿಕರ ಸುರಕ್ಷತೆಯಿಂದಾಗಿ ನಿರ್ಭಯ ಯೋಜನೆ ಅಡಿ ಯಲ್ಲಿ ಬಸ್ಸಿನಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಬಿಎಂಟಿಸಿ ಎಂಡಿ ಅನ್ಬು ಕುಮಾರ್ ಮಾಹಿತಿ ನೀಡಿದ್ದು, ಬಿಎಂ ಟಿಸಿಯ ಎಲ್ಲಾ ಬಸ್ಸುಗಳಿಗೆ ಸಿಸಿ ಕ್ಯಾಮೆರಾ ಹಾಗೂ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು ಚಿಂತಿಸಲಾಗಿದೆ ಎಂದು ತಿಳಿಸಿದ್ದಾರೆ.ಇನ್ನೂ ಪ್ರ ಯಾಣಿಕರಿಗೆ ಅನುಕೂಲ ಆಗುವಂತೆ ಪ್ಯಾನಿಕ್ ಬಟನ್ ಗಳನ್ನು ಅಳವಡಿಸಲಿದ್ದು, ಮತ್ತಷ್ಟು ಸುರಕ್ಷತೆಗೆ ಇದೀಗ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.