Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಇಂದಿನಿಂದ 2022-23 ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದೆ.
ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ಬೆಳಗ್ಗೆ ಸಂಸತ್ನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಾತನಾಡಲಿದ್ದಾರೆ.
ಅಧಿವೇಶನ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೊದಲ ಭಾಗ ಫೆ.11ಕ್ಕೆ ಮುಕ್ತಾಯವಾಗಲಿದೆ. ಎರಡನೇ ಭಾಗ ಮಾ.14ರಿಂದ ಏ.8 ರವರೆಗೆ ನಡೆಯಲಿದೆ. ಕೊರೋನಾದಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಈ ಬಾರಿ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.