Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಈ ಹಿಂದಿನಿಂದಲೂ ಸ್ಯಾಟ್ಲೈಟ್ ಫೋನ್ ಆಕ್ಟೀವ್ ಆಗಿದ್ದು ಕೇಂದ್ರದ ಗುಪ್ತದಳ, ಸ್ಥಳೀಯ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಅದಕ್ಕಾಗಿ ಕೋಸ್ಟ್ ಗಾರ್ಡ್ನ ಭದ್ರತಾ ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಲು ಭಾರತ ಸರ್ಕಾರ ಯೋಜನೆ ರೂಪಿಸಿದೆ ಎಂದು ಭಾರತೀಯ ತಟರಕ್ಷಕ ಪಡೆಯ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡ್ಕರ್ ತಿಳಿಸಿದ್ದಾರೆ.
ಕಾರವಾರದ ಕೋಸ್ಟ್ಗಾರ್ಡ್ ಕಚೇರಿಗೆ ಆಗಮಿಸಿದ್ದ ಮನೋಜ್ ಬಾಡ್ಕರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಕೋಸ್ಟ್ ಗಾರ್ಡ್ನ ಭದ್ರತಾ ಶಕ್ತಿ ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.