ಕಾವೇರಿ ನಿರ್ವಹಣಾ ಮಂಡಳಿ ರಚನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರಕಾರ ಅಕ್ಷೇಪಣೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30 ರಂದು ಮಾಡಿದ್ದ ತಪ್ಪನ್ನು ಕೇಂದ್ರ ಸರಕಾರ ತಿದ್ದುಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿ ನಾನು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವುದನ್ನು ಪ್ರಧಾನಿ ಮೋದಿ ಗಂಭೀರವಾಗಿ ಗಮನಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್ 30 ರಂದು ಮಾಡಿದ್ದ ತಪ್ಪನ್ನು ಕೇಂದ್ರ ಸರಕಾರ ತಿದ್ದುಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರಕಾರ ಆಕ್ಷೇಪಣೆ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾವೇರಿ ವಿವಾದ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಾವೇರಿಗಾಗಿ ನಿರಂತರ ಹೋರಾಟ ಮಾಡುತ್ತೇವೆ. ಕಾದು ನೋಡೋಣ ಏನಾಗಲಿದೆ ಎಂದು ಹೇಳಿದರು.
ವಿವಾದ ಇತ್ಯರ್ಥಗೊಳಿಸಿ ಎಂದು ಪ್ರಧಾನಿಗೆ ಹೇಳಿದ್ದೆ....
13 ದಿನಗಳ ಹಿಂದೆ ಕಾವೇರಿ ವಿಚಾರವಾಗಿ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದೆ, ಹೇಗಾದರೂ ಮಾಡಿ ವಿವಾದವನ್ನು ಬಗೆಹರಿಸುವಂತೆ ಕೋರಿದ್ದೆ. ಒಂದೇ ದಿನದಲ್ಲಿ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠದಿಂದ ನ್ಯಾಯ ಸಿಗುವುದಿಲ್ಲ. ಹೀಗಾಗಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ