Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿಲ್ಲದೇ ತೀವ್ರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಇಂದು ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಇಂದು ಮಧ್ಯಾಹ್ನ ಕೊಪ್ಪಳ ಜಿಲ್ಲೆಗೆ ಕೇಂದ್ರ ತಂಡ ಮೊದಲು ಭೇಟಿ ನೀಡಲಿದೆ. ಈ ವೇಳೆ ಕೃಷಿ ಸಚಿವ ಕೃಷ್ಣಭೈರೇಗೌಡ ಹಾಗೂ ತಂಡ ಕೂಡಾ ಅಧಿಕಾರಿಗಳಿಗೆ ಸಾಥ್ ನೀಡಲಿದ್ದಾರೆ.
ತೀವ್ರ ಬರಗಾಲ ಎದುರಿಸುತ್ತಿರುವ ಕೊಪ್ಪಳ, ಗದಗ, ಕುಷ್ಠಗಿ ತಾಲೂಕು ಮುಂತಾದೆಡೆ ಬರ ಅಧ್ಯಯನ ತಂಡ ಭೇಟಿ ನೀಡಲಿದೆ. ನೈರ್ಮಲ್ಯ ವಿಭಾಗದ ಹೆಚ್ಚುವರಿ ಸಲಹೆಗಾರ ಡಿ ರಾಜಶೇಖರ ನೇತೃತ್ವದ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ.