ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಮೇಲೆ ರೋಷನ್ ಬೇಗ್ ಆರೋಪ ಮಾಡಿದ ಹಿನ್ನಲೆಯಲ್ಲಿ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ದಿಢೀರ ಸುದ್ದಿಗೋಷ್ಟಿ ಕರೆದ ರೋಷನ್ ಬೇಗ್, ಇದರಲ್ಲಿ ನನ್ನ ಪಾತ್ರವಿಲ್ಲ ನನ್ನ ವಿರುದ್ದ ಪಿತೂರಿ ನಡೆಸಲಾಗುತ್ತಿದ್ದು, ನಾನು ಬೆಂಗಳೂರಿನಿಂದ ನವದೆಹಲಿಗೆ ಹೋದ ವೇಳೆಯಲ್ಲಿ ಆಡಿಯೋ ವೈರಲ್ ಆಗಿದೆ. ಇದರ ಹಿಂದೆ ಹಲವರ ಕೈವಾಡವಿದೆ ಅಂತ ಆರೋಪಿಸಿದ್ದರು.
ಈ ಹೇಳಿಕೆಯ ಬಗ್ಗೆ ಗರಂ ಆದ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ , ಬೇಗ್ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡ್ತಿದ್ದಾರೆ. ಬೇಗ್ ಹೇಳಿಕೆ ನಂತರ ಪ್ರಕರಣ ಗಂಭೀರ ಸ್ವರೂಪಕ್ಕೆ ತಿರುಗಿದೆ. ನನ್ನನ್ನು ಸಿಲುಕಿಸಲು ಷಡ್ಯಂತ್ರ ಮಾಡ್ತಿದ್ದಾರೆಂದು ಆರೋಪಿಸಿದ್ದಾರೆ. ಬಿಜೆಪಿಯವರಿಗೆ ಇದು ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಮುಜುಗರ ತರುತ್ತಿದೆ ಎಂದು ಬೇಗ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದಾರೆ.